Acts 27:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.
Kannada BSI Bible 2016
ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕಾದವರಲ್ಲಿ ಕೆಲವರು ಹಲಿಗೆಗಳ ಮೇಲೆ ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Kannada Bible (KNCL) BSI 2016
ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.