Acts 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು ‘ಮುರ’ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
Kannada BSI Bible 2016
ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರ ಮೇಲೆ ಹತ್ತಿಸಿದನು.
Kannada Bible (KNCL) BSI 2016
ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.