Acts 27:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
Kannada BSI Bible 2016
ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕ ದಿವಸ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಎದುರಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದದರಿಂದ ಕ್ರೇತದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಎದುರಾಗಿ ಬಂದು
Kannada Bible (KNCL) BSI 2016
ನಾವು ಅನೇಕ ದಿನಗಳವರೆಗೆ ನಿಧಾನವಾಗಿ ಪ್ರಯಾಣಮಾಡಿದೆವು. ಅತಿ ಕಷ್ಟದಿಂದ ‘ಸ್ನೀಡ’ ಎಂಬ ಊರಿಗೆ ಎದುರಾಗಿ ಬಂದೆವು. ಆ ದಿಸೆಯಲ್ಲಿ ಪ್ರಯಾಣಮಾಡಲು ಎದುರುಗಾಳಿ ನಮ್ಮನ್ನು ಬಿಡಲಿಲ್ಲ. ಆದ್ದರಿಂದ ನಾವು ಸಾಲ್ಮೋನೆ ಭೂಶಿರವನ್ನು ದಾಟಿ, ಕ್ರೇಟ್ ದ್ವೀಪದ ಮರೆಯನ್ನು ಸೇರಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.