Acts 28:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
Kannada BSI Bible 2016
ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ ನಾವು ಬಿಟ್ಟು ಹೊರಟಾಗ ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
Kannada Bible (KNCL) BSI 2016
ಅವರೆಲ್ಲರು ನಮ್ಮನ್ನು ಹಲವಾರು ವಿಧದಲ್ಲಿ ಬಹುಮಾನಿಸಿದರು; ಮಾತ್ರವಲ್ಲ, ನಾವು ಅಲ್ಲಿಂದ ನೌಕಾಯಾನವನ್ನು ಮುಂದುವರಿಸಿದಾಗ, ನಮಗೆ ಅವಶ್ಯವಾದುದೆಲ್ಲವನ್ನು ತಂದು ಹಡಗಿನಲ್ಲಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.