Acts 28:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 10
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
Kannada BSI Bible 2016
ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆದಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ.
Kannada Bible (KNCL) BSI 2016
ಈಗಾಗಲೇ ಮೂರು ತಿಂಗಳು ಕಳೆದಿದ್ದವು. ಅಲೆಕ್ಸಾಂಡ್ರಿಯಕ್ಕೆ ಸೇರಿದ ‘ಅಶ್ವಿನಿ’ ಎಂಬ ಹಡಗೊಂದು ಚಳಿಗಾಲದ ನಿಮಿತ್ತ ಅಲ್ಲಿ ಲಂಗರುಹಾಕಿತ್ತು. ನಾವು ಅದನ್ನು ಹತ್ತಿ ಪ್ರಯಾಣ ಮುಂದುವರಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು.