Acts 28:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೇಗಿಯ ಎಂಬ ಪಟ್ಟಣಕ್ಕೆ ಬಂದೆವು. ಮರುದಿನ ನೈರುತ್ಯ ಗಾಳಿಯು ಬೀಸತೊಡಗಿತು. ಆದ್ದರಿಂದ ಅಲ್ಲಿಂದ ಹೊರಡಲು ಸಾಧ್ಯವಾಯಿತು. ಒಂದು ದಿನವಾದ ಮೇಲೆ ಪುತೋಲಿ ಎಂಬ ಪಟ್ಟಣಕ್ಕೆ ಬಂದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
Kannada BSI Bible 2016
ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ನಾವು ಸುತ್ತಿಕೊಂಡು ಹೋಗಿ ರೇಗಿಯಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣಗಾಳಿ ಹುಟ್ಟಿದ್ದರಿಂದ ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
Kannada Bible (KNCL) BSI 2016
ಅಲ್ಲಿಂದ ಮುಂದುವರಿದು ರೇಗಿಯ ಪಟ್ಟಣಕ್ಕೆ ಬಂದೆವು. ಮಾರನೆಯ ದಿನ ತೆಂಕಣಗಾಳಿ ಬೀಸತೊಡಗಿತು. ಎರಡೇ ದಿನಗಳಲ್ಲಿ ನಾವು ಪುತೋಲಿ ರೇವನ್ನು ಮುಟ್ಟಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.