Acts 28:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ ‘ಅಪ್ಪಿಯ’ ಮಾರುಕಟ್ಟೆಗೂ ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
Kannada BSI Bible 2016
ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.
Kannada Bible (KNCL) BSI 2016
ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.