Acts 28:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
Kannada BSI Bible 2016
ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
Kannada Bible (KNCL) BSI 2016
ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.