Acts 28:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
Kannada BSI Bible 2016
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
Kannada Bible (KNCL) BSI 2016
ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.