Acts 28:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
Kannada BSI Bible 2016
ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
Kannada Bible (KNCL) BSI 2016
ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.