Acts 28:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು. (Verses 21-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
Kannada BSI Bible 2016
ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ.
Kannada Bible (KNCL) BSI 2016
ಅದಕ್ಕೆ ಅವರು, “ನಿನ್ನ ವಿಷಯವಾಗಿ ಜುದೇಯದಿಂದ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರು ಯಾರೂ ಏನನ್ನೂ ವರದಿಮಾಡಿಲ್ಲ. ಯಾವ ದೋಷಾರೋಪಣೆಯನ್ನೂ ತಂದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.