Acts 28:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 21
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
Kannada BSI Bible 2016
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.
Kannada Bible (KNCL) BSI 2016
ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.