Acts 28:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
Kannada BSI Bible 2016
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
Kannada Bible (KNCL) BSI 2016
ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.