Acts 28:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಈ ಜನರ ಹೃದಯಗಳು ಕಠಿಣವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
Kannada BSI Bible 2016
ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದೇ.
Kannada Bible (KNCL) BSI 2016
ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, ಕಿವಿಗಳಿಂದ ಕೇಳಿಸಿಕೊಂಡು, ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.