Acts 28:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.
Kannada BSI Bible 2016
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.
Kannada Bible (KNCL) BSI 2016
ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.