Acts 28:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada Bible (KNCL) BSI 2016
ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.