Acts 28:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.
Kannada BSI Bible 2016
ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ.
Kannada Bible (KNCL) BSI 2016
ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.