Acts 28:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನ ಮೈ ಊದಿಕೊಂಡು ಇದ್ದಕ್ಕಿದ್ದಂತೆ ಸತ್ತುಬೀಳುತ್ತಾನೆ ಎಂದು ಅವರು ತಿಳಿದುಕೊಂಡಿದ್ದರು. ಅವರು ಪೌಲನನ್ನೇ ಬಹು ಹೊತ್ತಿನವರೆಗೆ ದಿಟ್ಟಿಸಿ ನೋಡುತ್ತಿದ್ದರೂ ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ. ಆದ್ದರಿಂದ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿ, “ಇವನೊಬ್ಬ ದೇವರು!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.
Kannada BSI Bible 2016
ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು. ಬಹಳ ಹೊತ್ತು ನೋಡಿಕೊಂಡಿದ್ದ ಮೇಲೆ ಅವನಿಗೆ ವಿಕಾರವೇನೂ ಆಗಿಲ್ಲವೆಂದು ಕಂಡು ಬೇರೆ ಯೋಚನೆಯುಳ್ಳವರಾಗಿ - ಇವನು ಒಬ್ಬ ದೇವರು ಎಂದು ಹೇಳಿಕೊಂಡರು.
Kannada Bible (KNCL) BSI 2016
ಆ ಜನರು, “ಈಗ ಅವನ ಮೈ ಊದಿಕೊಳ್ಳುತ್ತದೆ; ಈಗಲೇ ಅವನು ಫಕ್ಕನೆ ಸತ್ತುಬೀಳುತ್ತಾನೆ,” ಎಂದು ಕಾದಿದ್ದರು. ಎಷ್ಟುಹೊತ್ತು ಕಾದರೂ ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿದರು. “ಇವನೊಬ್ಬ ದೇವರು,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.