Acts 28:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
Kannada BSI Bible 2016
ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು.
Kannada Bible (KNCL) BSI 2016
ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಬೇಧಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ, ಪ್ರಾರ್ಥನೆ ಮಾಡಿ, ತನ್ನ ಕರಗಳನ್ನು ಅವನ ಮೇಲಿಟ್ಟು, ಅವನನ್ನು ಗುಣಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.