Acts 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 9
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
Kannada BSI Bible 2016
ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಕೂತು ಭಿಕ್ಷಾಬೇಡುತ್ತಿದ್ದವನೆಂದು ಗುರುತುಹಿಡಿದು ಅವನಿಗೆ ಸಂಭವಿಸಿದ್ದಕ್ಕೆ ವಿಸ್ಮಯಹಿಡಿದವರಾಗಿ ಬಹಳ ಬೆರಗಾದರು.
Kannada Bible (KNCL) BSI 2016
ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.