Acts 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
Kannada BSI Bible 2016
ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪೇತ್ರ ಯೋಹಾನರನ್ನು ಹಿಡುಕೊಂಡೇ ಇರುವಾಗ ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಅವರ ಬಳಿಗೆ ಸೊಲೊಮೋನನದೆಂಬ ಹೆಸರುಳ್ಳ ಮಂಟಪಕ್ಕೆ ಗುಂಪು ಗುಂಪಾಗಿ ಓಡಿಬಂದರು.
Kannada Bible (KNCL) BSI 2016
‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.