Acts 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
Kannada BSI Bible 2016
ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
Kannada Bible (KNCL) BSI 2016
ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?