Acts 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
Kannada BSI Bible 2016
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.
Kannada Bible (KNCL) BSI 2016
ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.