Acts 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
Kannada BSI Bible 2016
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.
Kannada Bible (KNCL) BSI 2016
ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.