Acts 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
Kannada BSI Bible 2016
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
Kannada Bible (KNCL) BSI 2016
ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.