Acts 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
Kannada BSI Bible 2016
ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.
Kannada Bible (KNCL) BSI 2016
ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.