Acts 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು ‘ಸುಂದರ ದ್ವಾರ’. ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
Kannada BSI Bible 2016
ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.
Kannada Bible (KNCL) BSI 2016
‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.