Acts 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
Kannada BSI Bible 2016
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.
Kannada Bible (KNCL) BSI 2016
ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.