Acts 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಇಂತೆಂದಿದ್ದಾನೆ: ‘ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಆ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಆ ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
Kannada BSI Bible 2016
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಹೇಳಿದ್ದೇನಂದರೆ - ದೇವರಾಗಿರುವ ಕರ್ತನು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು, ಆತನು ನಿಮಗೆ ಹೇಳುವ ಎಲ್ಲಾ ಮಾತುಗಳಿಗೆ ಕಿವಿಗೊಡಬೇಕು;
Kannada Bible (KNCL) BSI 2016
‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.