Acts 3:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
Kannada BSI Bible 2016
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪ್ರವಾದಿಗಳ ಶಿಷ್ಯರೂ ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ - ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
Kannada Bible (KNCL) BSI 2016
ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.