Acts 3:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
Kannada BSI Bible 2016
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”