Acts 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕೂಡಲೇ ಅವನ ಕಾಲುಗಳು ಮತ್ತು ಪಾದಗಳು ಬಲಗೊಂಡವು. ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
Kannada BSI Bible 2016
ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
Kannada Bible (KNCL) BSI 2016
ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.