Acts 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
Kannada BSI Bible 2016
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.
Kannada Bible (KNCL) BSI 2016
ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.