Acts 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
Kannada BSI Bible 2016
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.
Kannada Bible (KNCL) BSI 2016
ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.