Acts 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
Kannada BSI Bible 2016
ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು.
Kannada Bible (KNCL) BSI 2016
ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.