Acts 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
Kannada BSI Bible 2016
ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು.
Kannada Bible (KNCL) BSI 2016
“ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.