Acts 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
Kannada BSI Bible 2016
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇದು ಜನರಲ್ಲಿ ಇನ್ನೂ ಹಬ್ಬದಂತೆ ಮುಂದೆ ಆ ಹೆಸರನ್ನು ಎತ್ತಿ ಯಾರ ಸಂಗಡಲೂ ಮಾತಾಡಬಾರದೆಂದು ಅವರನ್ನು ಬೆದರಿಸೋಣ ಎಂಬದಾಗಿ ಒಬ್ಬರ ಕೂಡೊಬ್ಬರು ಆಲೋಚನೆ ಮಾಡಿಕೊಂಡು
Kannada Bible (KNCL) BSI 2016
ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು.