Acts 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
Kannada BSI Bible 2016
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;
Kannada Bible (KNCL) BSI 2016
ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.