Acts 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
Kannada BSI Bible 2016
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು
Kannada Bible (KNCL) BSI 2016
ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.