Acts 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು!) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು. (Verses 21-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
Kannada BSI Bible 2016
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.
Kannada Bible (KNCL) BSI 2016
ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.