Acts 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
Kannada BSI Bible 2016
ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
Kannada Bible (KNCL) BSI 2016
ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.