Acts 4:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
Kannada BSI Bible 2016
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
Kannada Bible (KNCL) BSI 2016
ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.