Acts 4:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
Kannada BSI Bible 2016
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು
Kannada Bible (KNCL) BSI 2016
“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.