Acts 4:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
Kannada BSI Bible 2016
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.
Kannada Bible (KNCL) BSI 2016
ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.