Acts 4:30 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
Kannada BSI Bible 2016
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
Kannada Bible (KNCL) BSI 2016
ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”