Acts 4:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
Kannada BSI Bible 2016
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.
Kannada Bible (KNCL) BSI 2016
ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.