Acts 4:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
Kannada BSI Bible 2016
ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು.
Kannada Bible (KNCL) BSI 2016
ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.