Acts 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
Kannada BSI Bible 2016
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
Kannada Bible (KNCL) BSI 2016
ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.