Acts 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
Kannada BSI Bible 2016
ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಜನರಲ್ಲಿ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಇರುತ್ತಿದ್ದರು.
Kannada Bible (KNCL) BSI 2016
ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.