Acts 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
Kannada BSI Bible 2016
ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
Kannada Bible (KNCL) BSI 2016
ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.